9:11 AM Wednesday 15 - October 2025

ತಮಿಳುನಾಡು ಸಚಿವರ ಚಾಲಕ, ಸ್ನೇಹಿತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನಿಂದ ಗಂಭೀರ ಆರೋಪ

10/09/2024

ತಮಿಳುನಾಡಿನ ಸಚಿವರ ಡ್ರೈವರ್ ಮತ್ತು ಆತನ ಸ್ನೇಹಿತರು ಕಾಲೇಜು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ತಮಿಳುನಾಡಿನ ಬಿಜೆಪಿ ನಾಯಕರೊಬ್ಬರು ಗಂಭೀರವಾಗಿ ಆರೋಪಿಸಿದ್ದಾರೆ.

ಇನ್ನು ರಾಜ್ಯ ಪೊಲೀಸರು ಅಪರಾಧವನ್ನು ಮುಚ್ಚಿಹಾಕುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಘಟನೆಯಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು, ತಮಿಳುನಾಡಿನ ಬಿಜೆಪಿ ಕೈಗಾರಿಕಾ ವಿಭಾಗದ ಉಪಾಧ್ಯಕ್ಷ ಸೆಲ್ವ ಕುಮಾರ್, ಆರೋಪಿ ಚಾಲಕ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಗೆ ಕೆಲಸ ಮಾಡುತ್ತಿದ್ದನು ಎಂದು ಹೇಳಿದ್ದಾರೆ.

ಆರೋಪಿಗಳು ಕಾಲೇಜು ಹುಡುಗಿಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ಆ ಅಪರಾಧದ ವೀಡಿಯೊವನ್ನು ಶೂಟ್ ಮಾಡಿದ್ದಾರೆ. ಈ ವೀಡಿಯೋ ಮೂಲಕ ಹುಡುಗಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತೆ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ಈ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಸಚಿವರ ಚಾಲಕ ಭಾಗಿಯಾಗಿರುವುದರಿಂದ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಹುಶಃ ಪೊಲೀಸ್ ಅಧೀಕ್ಷಕರು ಈ ಅಪರಾಧಗಳನ್ನು ಮುಚ್ಚಿಹಾಕುವಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.

ಸೆಪ್ಟೆಂಬರ್ 3 ರಂದು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು 17 ವರ್ಷದ ಬಾಲಕಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾಳೆ ಎಂದು ಇಂಡಿಯಾ ಟುಡೇ ಟಿವಿ ಕಂಡುಕೊಂಡಿದೆ.

ಆರೋಪಿ ಚಾಲಕ ಸಿಲಂಬರಸನ್ ಮೊದಲು ತನ್ನೊಂದಿಗೆ ಸ್ನೇಹ ಬೆಳೆಸಿದ್ದನು ಮತ್ತು ನಂತರ ತನ್ನ ಸ್ನೇಹಿತರೊಂದಿಗೆ ವಿವಿಧ ಸ್ಥಳಗಳಿಗೆ ಹೋಗುವಂತೆ ಒತ್ತಾಯಿಸಲು ಪ್ರಾರಂಭಿಸಿದ್ದ. ಈ ಸಮಯದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವಿದ್ಯಾರ್ಥಿನಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version