ತಮಿಳುನಾಡಿನಲ್ಲಿ ಭಾರೀ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ - Mahanayaka
10:03 PM Wednesday 22 - October 2025

ತಮಿಳುನಾಡಿನಲ್ಲಿ ಭಾರೀ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

19/06/2023

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ತಮಿಳುನಾಡು ರಾಜ್ಯದ ಮೂರು ಜಿಲ್ಲೆಗಳ ಜಿಲ್ಲಾಡಳಿತವು ಜೂನ್ 19 ರಂದು ರಜೆ ಘೋಷಿಸಿದೆ. ಭಾರೀ ಮಳೆ ಮತ್ತು ಮಳೆಯ ಮುನ್ಸೂಚನೆಯಿಂದಾಗಿ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜೂನ್ 19 ರಂದು ತಮಿಳುನಾಡು ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ 5 ದಿನಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ಕಲ್ಲಕುರಿಚಿ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವರೂರ್, ತಂಜಾವೂರು, ತಿರುಚಿರಾಪಳ್ಳಿ, ಅರಿಯಲೂರು ಮತ್ತು ಪೆರಂಬಲೂರು ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ