3:17 AM Thursday 23 - October 2025

ತನ್ನಲ್ಲಿ ಮಹಾಶಕ್ತಿ ಇದೆ ಎಂದು ಹೇಳ್ತಿದ್ದ ಯುವಕ: ಕಾಲೇಜು ಹಾಸ್ಟೆಲ್ ನಿಂದ ಜಿಗಿದೇ ಬಿಟ್ಟ ವಿದ್ಯಾರ್ಥಿ; ಕೊನೆಗೆ ಆಗಿದ್ದು ಇದೇ!

30/10/2024

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನ ನಾಲ್ಕನೇ ಮಹಡಿಯಿಂದ ಜಿಗಿದು 19 ವರ್ಷದ ವಿದ್ಯಾರ್ಥಿ ಗಾಯಗೊಂಡ ಘಟನೆ ನಡೆದಿದೆ.

ಕರ್ಪಗಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಪ್ರಭು, ಕಾಲೇಜ್ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ. ಈತ ತನ್ನ ಸ್ನೇಹಿತರ ಹತ್ತಿರ ತಾನು ಮಹಾಶಕ್ತಿಗಳನ್ನು ಹೊಂದಿದ್ದೇನೆ. ತನಗೆ ಏನೂ ಹಾನಿಯಾಗುವುದಿಲ್ಲ ಎಂದು ಹೇಳಿದ್ದ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ನೀಲಿ ಶರ್ಟ್ ಧರಿಸಿದ ಪ್ರಭು ಕೊಠಡಿಯಿಂದ ಹೊರಬಂದು ಹಾಸ್ಟೆಲ್ ಕಾರಿಡಾರ್ ಕಡೆಗೆ ನಡೆಯುತ್ತಿರುವುದು ಕಂಡುಬಂದಿದೆ. ನಂತರ ಅವನು ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿಯುತ್ತಾನೆ. ವಿದ್ಯಾರ್ಥಿಯ ಕೈ, ಕಾಲು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ.

ವಿದ್ಯಾರ್ಥಿ ಪ್ರಭು ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಚೆಟ್ಟಿಪಾಳಯಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version