ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ.ಅಣ್ಣಾಮಲೈ ನೇಮಕ - Mahanayaka
11:57 PM Thursday 28 - August 2025

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ.ಅಣ್ಣಾಮಲೈ ನೇಮಕ

annamalai
08/07/2021


Provided by

ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.

ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್.ಮುರುಗನ್ ಅವರು ಕೇಂದ್ರ ಸಚಿವ ಸಂಪುಟ ಸೇರಿದ ಬೆನ್ನಲ್ಲೇ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಕಳೆದ ಎರಡು ತಿಂಗಳ ಹಿಂದೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ ಅವರು ಡಿಎಂಕೆ ಅಭ್ಯರ್ಥಿ ಆರ್.ಇಲಂಗೋ ವಿರುದ್ಧ 24 ಸಾವಿರ ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.

ಇತ್ತೀಚಿನ ಸುದ್ದಿ