8:33 AM Wednesday 20 - August 2025

ಹಿಜಾಬ್ ವಿವಾದ: ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ಡಾ.ಅಂಬೇಡ್ಕರ್ ನೀಡಿದ್ದಾರೆ | ಶಾಸಕಿ ಕನೀಝ್ ಫಾತಿಮಾ

hijab
06/02/2022

ಬೆಳಗಾವಿ:  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಮುಸ್ಲಿಮ್  ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಅಡ್ಡಿಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಝ್ ಫಾತಿಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ವಿಧಾನ ಸೌಧದೊಳಗೆ ಹಿಜಾಬ್ ಧರಿಸಿಕೊಂಡು ಹೋಗುವುದನ್ನು ತಡೆಯಲಿ ನೋಡೋಣ ಎಂದು ಸವಾಲು ಹಾಕಿರುವ ಅವರು,  ಹಿಜಾಬ್ ಧರಿಸುವುದನ್ನು ತಡೆಯುವುದು, ಹಲವು ಕೋಮುಸೌಹಾರ್ದ ಕೆಡಿಸುವ ವಿಷಯಗಳು ರಾಜ್ಯದಲ್ಲಿ ಹೊಸ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿವೆ. ಹಿಂದಿನ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಜಾಬ್ ಅಥವಾ ಬುರ್ಖಾ ಧರಿಸುವುದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ, ಬಟ್ಟೆ ಧರಿಸುವ ಹಕ್ಕು ವೈಯಕ್ತಿಕ. ನಮ್ಮ ಸಂಸ್ಕೃತಿಯಲ್ಲಿ ಹಿಜಾಬ್ ಧರಿಸುವ ಸಂಪ್ರದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ನೀಡಿದ್ದಾರೆ. ಅದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ಕುಟುಂಬದ ಐವರ ಬರ್ಬರ ಹತ್ಯೆ: ಮಕ್ಕಳು ಎಂದೂ ನೋಡದ ಕೊಚ್ಚಿ ಹಾಕಿದರು!

ಪತ್ನಿಯ ಅಧಿಕಾರ ಚಲಾಯಿಸುತ್ತಿರುವ ಗಂಡ: ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಆಕ್ರೋಶ

ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

ಶಾಲೆ ಸರಸ್ವತಿ ಮಂದಿರ, ತಾಲಿಬಾನ್ ಮಾಡಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ | ತಾಲೂಕು ಅಭ್ಯಾಸ ವರ್ಗ-2022

 

ಇತ್ತೀಚಿನ ಸುದ್ದಿ

Exit mobile version