3:58 AM Monday 15 - September 2025

ಬೈಕ್ ಗೆ ಟ್ಯಾಂಕರ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು, ವಿದ್ಯಾರ್ಥಿನಿ ಸ್ಥಿತಿ ಗಂಭೀರ

bajagolli
02/02/2023

ಕಾರ್ಕಳ: ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಫೆ.2ರಂದು ಮಧ್ಯಾಹ್ನ ವೇಳೆ ಟ್ಯಾಂಕರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಂಗಳೂರಿನ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ, ಮಹಾರಾಷ್ಟ್ರ ಮೂಲದ ವೈಭವ್ ಮೃತ ದುರ್ದೈವಿ. ಅಪಘಾತದಲ್ಲಿ ಗಾಯಗೊಂಡಿರುವ ಸಹಸವಾರೆ ಕೋಲಾರ ಮೂಲದ ಅದೇ ಕಾಲೇಜಿನ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಇವರು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊರನಾಡು ದೇವಸ್ಥಾನಕ್ಕೆ ಹೋಗಿ ವಾಪಾಸ್ಸು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version