ಕೂಲಿ ಕಾರ್ಮಿಕರಿದ್ದ ಟಾಟಾಎಸ್ ವಾಹನ ಪಲ್ಟಿ: ಓರ್ವ ಸಾವು: 8 ಮಂದಿಗೆ ಗಂಭೀರ ಗಾಯ

ಚಾಮರಾಜನಗರ: ಟಾಟಾಎಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ 8 ಜನರು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆ ಉಗೇನಹುಂಡಿ ಗ್ರಾಮದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು(27) ಸಾವನ್ನಪ್ಪಿದವರಾಗಿದ್ದಾರೆ. ವಾಹನದಲ್ಲಿದ್ದ ಇತರ 8 ಮಂದಿಯ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಮನೆ ತಾರಸಿ ಹಾಕುವ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಾಹನದಲ್ಲಿದ್ದವರೆಲ್ಲರೂ ಕೂಲಿಕಾರ್ಮಿಕರಾಗಿದ್ದಾರೆ. ಬೆಳಗ್ಗೆ ಎದ್ದು ದುಡಿಮೆಗಾಗಿ ತೆರಳುತ್ತಿದ್ದ ವೇಳೆ ಉಗೇನಹುಂಡಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw