ಆಂಧ್ರದಲ್ಲಿ ಮುಸ್ಲಿಂ ಮೀಸಲಾತಿ ಮುಂದುವರಿಕೆ: ಟಿಡಿಪಿ ಸ್ಪಷ್ಟನೆ

ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮತ್ತು ಬಿಜೆಪಿಯೊಂದಿಗೆ ಗೆದ್ದ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಆರ್ ರವೀಂದ್ರ ಕುಮಾರ್ ಅವರು ದಕ್ಷಿಣ ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ ಮೀಸಲಾತಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
“ಹೌದು. ನಾವು ಅದನ್ನು ಮುಂದುವರಿಸುತ್ತೇವೆ (ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿ). ಯಾವುದೇ ಸಮಸ್ಯೆ ಇಲ್ಲ” ಎಂದು ಕುಮಾರ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ತಮ್ಮ ಮಿತ್ರ ಪಕ್ಷ ಬಿಜೆಪಿಯ ಪ್ರತಿಪಾದನೆಯ ಹೊರತಾಗಿಯೂ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಮುಸ್ಲಿಂ ಕೋಟಾ ಮೀಸಲಾತಿಯನ್ನು ಮುಂದುವರಿಸುವುದಾಗಿ ಭರವಸೆ ನೀಡಿದ ಒಂದು ತಿಂಗಳ ನಂತರ ಕೆ ರವೀಂದ್ರ ಕುಮಾರ್ ಅವರ ಹೇಳಿಕೆ ಬಂದಿದೆ.
ಮೊದಲಿನಿಂದಲೂ ನಾವು ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಬೆಂಬಲಿಸುತ್ತಿದ್ದೇವೆ ಮತ್ತು ಅದು ಮುಂದುವರಿಯುತ್ತದೆ ” ಎಂದು ಚಂದ್ರಬಾಬು ನಾಯ್ಡು ಮೇ 5 ರಂದು ಸುದ್ದಿಗಾರರಿಗೆ ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth