ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ ವಿರುದ್ಧ ಕೇಸ್! - Mahanayaka

ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ ವಿರುದ್ಧ ಕೇಸ್!

teacher beats
06/12/2022

ಪುಣೆ: ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.


Provided by

ಇಲ್ಲಿನ ವನವಾಡಿ ಪೊಲೀಸರ ಠಾಣೆಯಲ್ಲಿ ಶಿಕ್ಷಕಿ ವಿರುದ್ಧ ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ  ದೂರು ದಾಖಲಿಸಲಾಗಿದೆ.

ಅಕ್ಟೋಬರ್ 20ರಂದು ಈ ಘಟನೆ ನಡೆದಿದ್ದು, ಈ ವಿಷಯ ಎಲ್ಲಿಯೂ ಹೇಳಬಾರದು ಎಂದು ಹಲ್ಲೆಯ ಬಳಿಕ ಶಿಕ್ಷಕಿ ಬಾಲಕನನ್ನು ಬೆದರಿಸಿದ್ದು,  ಇದೀಗ ಬಾಲಕ ತನ್ನ ಪೋಷಕರಿಗೆ ವಿಚಾರ ತಿಳಿಸಿದ್ದರಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವುದಾಗಿ ವನವಾಡಿ ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ