ಉಯ್ಯಾಲೆಯಾಡುತ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಶಿಕ್ಷಕಿ ಸಾವು

20/10/2023
ಚಾಮರಾಜನಗರ: ಉಯ್ಯಾಲೆಯಾಡುತ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಕೆ.ಪುಟ್ಟಿ(53) ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಎರಡನೇ ಮಹಡಿಯಿಂದ ಬಿದ್ದ ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.