ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ!

ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ.
ಅಖ್ತರ್ ಬೇಗಂ ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.
ಎರಡು ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವು ಸಿಕ್ಕಿರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಜಾತಿ ಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಒತ್ತಡದ ಕಾರಣದಿಂದ ಮಾನಸಿಕವಾಗಿ ಸಮಸ್ಯೆ ಎದುರಿಸುತ್ತಿದ್ದರು ಎಂದು ಮೂಲಗಳು ಹೇಳಿವೆ. ಇದು ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಲ್ಲಿ ಸುರಕ್ಷತೆ ಬಗ್ಗೆ ಭೀತಿ ಉಂಟು ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD