ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ: ಕಣ್ಣೀರು ಹಾಕಿದ ಬಿಜೆಪಿ ಶಾಸಕ ರಘುಪತಿ ಭಟ್‌ - Mahanayaka

ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ: ಕಣ್ಣೀರು ಹಾಕಿದ ಬಿಜೆಪಿ ಶಾಸಕ ರಘುಪತಿ ಭಟ್‌

raghupati bhat
12/04/2023

ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಟಿಕೆಟ್‌ ಘೋಷಣೆಯಾದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ. ಈ ಪೈಕಿ ಉಡುಪಿ ಹಾಲಿ ಶಾಸಕ ರಘುಪತಿ ಭಟ್‌ ಕೂಡ ಒಬ್ಬರು.

ಉಡುಪಿ ಹಾಲಿ ಶಾಸಕ ರಘುಪತಿ ಭಟ್‌ಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್‌ಪಾಲ್‌ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ರಘುಪತಿ ಭಟ್‌ ಬೆಂಬಲಿಗರು ಶಾಸಕರ ಮನೆಗೆ ದೌಡಾಯಿಸಿದ್ದಾರೆ.

ಟಿಕೆಟ್ ವಂಚಿತ ರಘುಪತಿ ಭಟ್ ಮನೆಗೆ ನೂರಾರು ಮಂದಿ ಅಭಿಮಾನಿಗಳು ಭೇಟಿ ನೀಡುತ್ತಿದ್ದು, ಅಭಿಮಾನಿಗಳನ್ನು ಕಂಡು ಘುಪತಿ ಭಟ್ ಭಾವುಕರಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಕ್‌ ನಲ್ಲಿದ್ದೇನೆ ಸದ್ಯ ಏನು ಹೇಳುವ ಸ್ಥಿತಿಯಲಿಲ್ಲ ಎಂದ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಟ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಎನ್ನುವುದು ಖಚಿತವಾಗಿದೆ. ಏನು ಹೇಳದೆ ಕೊನೆಗಳಿಗೆಯಲ್ಲಿ ಅವಕಾಶ ವಂಚನೆ ಮಾಡಿದ್ದಾರೆ. ಟಿವಿ ನೋಡಿ ನನಗೆ ಟಿಕೆಟ್ ಇಲ್ಲ ಅಂತ ಗೊತ್ತಾಗಬೇಕಾ?. ಪಕ್ಷದ ನಾಯಕರು ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಯಾವುದೇ ನಿರ್ಧಾರವನ್ನು ಪ್ರಕಟಿಸುವ ಸ್ಥಿತಿಯಲ್ಲಿ ಇಲ್ಲ. ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆ. ಪಕ್ಷಕ್ಕೆ ನನ್ನ ಅಗತ್ಯವಿಲ್ಲ ಎಂದು ತೋರುತ್ತದೆ. ಟಿಕೆಟ್ ಪಡೆದ ಯಶ್ ಪಾಲ್ ಸುವರ್ಣ ನಾನು ಬೆಳೆಸಿದ ಹುಡುಗ. ಯಶ್ ಪಾಲ್ ಸುವರ್ಣಗೆ ಟಿಕೆಟ್ ನೀಡಿದ ಬಗ್ಗೆ ಸಂತೋಷವಿದೆ ಎಂದಿದ್ದಾರೆ. ಆದರೆ ಬಿಜೆಪಿ ಟಿಕೆಟ್‌ ನೀಡಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಉಡುಪಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದ ಪ್ರಚಾರಕ್ಕೆ ನನ್ನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ನನಗೆ ಈ ಶಾಕ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ