ಅತ್ಯಾಚಾರಕ್ಕೆ ವಿರೋಧಿಸಿದ ಆಟಗಾರ್ತಿಯನ್ನು  ಕಟ್ಟಡದಿಂದ ಕೆಳಕ್ಕೆ ತಳ್ಳಿದ ದುಷ್ಕರ್ಮಿಗಳು! - Mahanayaka
1:00 PM Thursday 16 - October 2025

ಅತ್ಯಾಚಾರಕ್ಕೆ ವಿರೋಧಿಸಿದ ಆಟಗಾರ್ತಿಯನ್ನು  ಕಟ್ಟಡದಿಂದ ಕೆಳಕ್ಕೆ ತಳ್ಳಿದ ದುಷ್ಕರ್ಮಿಗಳು!

basketball player
19/08/2022

ಚಂಡೀಗಢ: 18 ವರ್ಷದ ಬ್ಯಾಸ್ಕೆಟ್ ಬಾಲ್ ಆಟಗಾರ್ತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಯುವಕರು ಆಕೆ ವಿರೋಧಿಸಿದ ಕಾರಣ ಕ್ರೀಡಾಂಗಣದ ಮೇಲ್ಛಾವಣಿಯಿಂದ ತಳ್ಳಿದ್ದು, ಪರಿಣಾಮವಾಗಿ  ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ.


Provided by

ಪಂಜಾಬ್ ನ ಮೋಗಾ ಜಿಲ್ಲೆಯಲ್ಲಿ 18 ವರ್ಷದ ಬ್ಯಾಸ್ಕೆಟ್ ಬಾಲ್ ಆಟಗಾರ್ತಿ ಮೇಲೆ ಈ ಕ್ರೌರ್ಯ ಮೆರೆಯಲಾಗಿದ್ದು, ಆಕೆಯ ಎರಡೂ ಕಾಲುಗಳು ಮತ್ತು ದವಡೆಗೆ ಗಂಭೀರವಾದ ಏಟು ತಗಲಿದ್ದು,  ಇದೀಗ ಸಂತ್ರಸ್ತೆಗೆ ಲುಧಿಯಾನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಗಸ್ಟ್ 12 ರಂದು ಈ ಘಟನೆ ನಡೆದಿದೆ. ಜತಿನ್ ಕಾಂಡ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಈತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಆದರೆ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ 25 ಅಡಿ ಎತ್ತರದಿಂದ ಕೆಳಕ್ಕೆ ತಳ್ಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಗಳ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಯತ್ನದ ಹಲವು ಸೆಕ್ಷನ್ ಗಳಡಿಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು  ಮೊಗಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಖುರಾನಾ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ