12:48 PM Thursday 23 - October 2025

ಕ್ರೂರ ಕೃತ್ಯ: ರಾಜಸ್ಥಾನದ ಶಾಲೆಯಲ್ಲಿ ಹಾಸ್ಟೆಲ್ ವಾರ್ಡನ್ ನಿಂದಲೇ ಬಾಲಕನ ಮೇಲೆ ಹಲ್ಲೆ

10/09/2023

ರಾಜಸ್ಥಾನದ ಸಿಕಾರ್ ನಲ್ಲಿ 15 ವರ್ಷದ ಬಾಲಕನನ್ನು ಹಾಸ್ಟೆಲ್ ವಾರ್ಡನ್ ಥಳಿಸಿದ ಘಟನೆ ನಡೆದಿದೆ. ಭಾರತೀಯ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಾಸ್ಟೆಲ್ ಸಿಬ್ಬಂದಿ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಮ್ಲಜನಕದ ಮಟ್ಟ ಕುಸಿದ ಕಾರಣ ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಯಿತು.

ಇದಾದ ನಂತರ ವೈದ್ಯರೊಂದಿ ಹಲ್ಲೆಗೊಳಗಾದ ವಿದ್ಯಾರ್ಥಿ ಹಾಸ್ಟೆಲ್ ವಾರ್ಡನ್ ತನ್ನನ್ನು ಥಳಿಸಿದ್ದಾನೆ ಎಂದು ಬಹಿರಂಗಪಡಿಸಿದ್ದಾನೆ.

ಇನ್ನು ಈ ಘಟನೆಯ ಬಗ್ಗೆ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಈ ಕುರಿತು ತನಿಖೆ ಆರಂಭಿಸಿದ್ದಾರೆ. ಮೊನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ ಯು) ಅಂಗವಿಕಲ ಪಿಎಚ್ ಡಿ ವಿದ್ಯಾರ್ಥಿಯ ಮೇಲೆ ಹಿರಿಯ ವಾರ್ಡನ್ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಹಲ್ಲೆ ನಡೆಸಿದ್ದರು. ವಿದ್ಯಾರ್ಥಿ ಮೂರ್ಛೆ ಹೋದಾಗ ಆಂಬ್ಯುಲೆನ್ಸ್ ಮೂಲಕ ಏಮ್ಸ್ ಗೆ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

Exit mobile version