ಮಹಿಳಾ ಕಾನ್ಸ್ ಟೇಬಲ್ ಮೇಲೆ ಗನ್ ತೋರಿಸಿ ಅತ್ಯಾಚಾರ: ಪೊಲೀಸ್ ಅಧಿಕಾರಿಯ ಬಂಧನ

ಮಹಿಳಾ ಹೆಡ್ ಕಾನ್ಸ್‌ಟೇಬಲ್ ಮೇಲೆ ಗನ್ ತೋರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೆಲಂಗಾಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭವಾನಿ ಸೇನ್ ಅವರನ್ನು ಬಂಧಿಸಲಾಗಿದೆ ಮತ್ತು ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 16 ರಂದು ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೋಣೆಯಲ್ಲಿ ಈ ಘಟನೆ ನಡೆದಿತ್ತು.
ಕಾಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ ಈ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ತನ್ನ ಮೇಲೆ ಅತ್ಯಾಚಾರ ಎಸಗುವ ಮೊದಲು ಎಸ್ಐ ಸೇನ್ ತನ್ನ ಸರ್ವಿಸ್ ರಿವಾಲ್ವರ್ ನಿಂದ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇದು ಆರೋಪಗಳನ್ನು ಬಹಿರಂಗಪಡಿಸಿದ್ದು ಹೀಗಾಗಿ ಎಸ್ಐ ವಿರುದ್ಧ ತಕ್ಷಣದ ಮತ್ತು ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth