ಅಕ್ರಮ ಪಡಿತರ ಅಕ್ಕಿ ಪ್ರಕರಣ: ಇತ್ಯರ್ಥಕ್ಕೆ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದ ಪೊಲೀಸರು

ಹೈದ್ರಾಬಾದ್ ನ ಸೂರ್ಯಪೇಟ್ ಜಿಲ್ಲೆಯ ತಿರುಮಲಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು 1 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದ ಸಬ್ ಇನ್ಸ್ ಪೆಕ್ಟರ್ (ಎಸ್ಐ) ಮತ್ತು ಕಾನ್ಸ್ ಟೇಬಲನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಆರೋಪಿಗಳಾದ ಎಸ್ಐ ವಿ.ಸುರೇಶ್ ಮತ್ತು ಕಾನ್ಸ್ ಟೇಬಲ್ ನಾಗರಾಜು ಅವರು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬೇರೆಡೆಗೆ ತಿರುಗಿಸಿದ ಪ್ರಕರಣವನ್ನು ಪರಿಹರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಮೇರೆಗೆ ಎಸಿಬಿ ಬಲೆ ಬೀಸಿ ಇಬ್ಬರನ್ನು ಬಂಧಿಸಿದೆ.
ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj