ಮೂವರಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ: ಆಘಾತಕ್ಕೊಳಗಾಗಿ 14 ವರ್ಷದ ಬಾಲಕಿ ಸ್ಥಳದಲ್ಲೇ ಸಾವು - Mahanayaka
2:50 AM Friday 12 - September 2025

ಮೂವರಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ: ಆಘಾತಕ್ಕೊಳಗಾಗಿ 14 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

17/08/2024

ತೆಲಂಗಾಣದ ಸೂರ್ಯಾಪೇಟ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ತನ್ನ ತಂದೆಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿದ 14 ವರ್ಷದ ಬಾಲಕಿ ಆಘಾತಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.


Provided by

ಭೂ ವಿವಾದವು ಹಿಂಸಾಚಾರಕ್ಕೆ ತಿರುಗಿದಾಗ ತಂದೆ ಕಸಮ್ ಸೋಮಯ್ಯ ಅವರ ಮಗಳು ಕಸಮ್ ಪವಾನಿ ಅವರ ಮುಂದೆ ಮೂವರು ವ್ಯಕ್ತಿಗಳು ಕೋಲುಗಳು ಮತ್ತು ಕಬ್ಬಿಣದ ರಾಡ್ ಗಳಿಂದ ಹಲ್ಲೆ ಮಾಡಿದ್ದಾರೆ.

ತನ್ನ ತಂದೆಯ ಮೇಲಿನ ದಾಳಿಯನ್ನು ನೋಡಿದ ಬಾಲಕಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ದಾಳಿಕೋರರನ್ನು ಕದರಿ ಸೈದುಲು, ಕದರಿ ಸೋಮಯ್ಯ ಮತ್ತು ಕಸಮ್ ಕಳಿಂಗಂ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ರಘುವೀರ್ ರೆಡ್ಡಿ ಮತ್ತು ಸಬ್ ಇನ್ಸ್ಪೆಕ್ಟರ್ ಐಲಯ್ಯ ಅವರು ತನಿಖೆ ನಡೆಯುತ್ತಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ