ಭಯಾನಕ: ಖಾಸಗಿ ಅಂಗವನ್ನು ಕತ್ತರಿಸಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಹೈದರಾಬಾದ್ ನ ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆ 18ರಲ್ಲಿ ಈ ಘಟನೆ ನಡೆದಿದೆ. ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದೀಕ್ಷಿತ್ ರೆಡ್ಡಿ ಎಂದು ಗುರುತಿಸಲಾಗಿದೆ. ದೀಕ್ಷಿತ್ ರೆಡ್ಡಿ ವಾಸವಿದ್ದ ಮನೆಯಲ್ಲಿಯೇ ಈ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಜಗದ್ಗಿರಿಗುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ ದೀಕ್ಷಿತ್ ರೆಡ್ಡಿ ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ. ಸಾಮಾನ್ಯವಾಗಿ ಯಾವುದೇ ಆತ್ಮಹತ್ಯ ಮಾಡಿಕೊಳ್ಳುವ ವ್ಯಕ್ತಿ ತನ್ನನ್ನು ತಾನು ಇಷ್ಟು ತೀವ್ರ ಮಟ್ಟಕ್ಕೆ ಹಿಂಸಿಸಿಕೊಳ್ಳಲು ಧೈರ್ಯ ಮಾಡುವುದಿಲ್ಲ.
ಸಾಯುವ ಮುನ್ನ ಆ ದೈಹಿಕ ಮತ್ತು ಮಾನಸಿಕ ನೋವನ್ನು ಯಾರೂ ಸಹಿಸಲಾರರು. ಆದರೆ ಈ ಘಟನೆಯಲ್ಲಿ ಯುವಕ ತನ್ನ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw