Telegram Ban: ದೇಶಾದ್ಯಂತ ಟೆಲಿಗ್ರಾಮ್ ಆಪ್ ತಾತ್ಕಾಲಿಕ ನಿಷೇಧ
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET–UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಅಧಿಕೃತ ನಿರ್ದೇಶನದಂತೆ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ ಭದ್ರತೆಯೊಂದಿಗೆ ನೀಟ್ ಮರು ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾಗದಂತೆ ತಡೆಯಲು ಮತ್ತು ಅಕ್ರಮಗಳಿಗೆ ಬ್ರೇಕ್ ಹಾಕಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಕೇಂದ್ರ ಸರ್ಕಾರದ ಈ ತ್ವರಿತ ನಿರ್ಧಾರವನ್ನು ಸ್ವಾಗತಿಸಿದೆ. ಈ ಕ್ರಮವು ಪರೀಕ್ಷೆಯ ನ್ಯಾಯಸಮ್ಮತತೆಯನ್ನು ಕಾಪಾಡಲು ಮತ್ತು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ತಡೆಯಲು ನೆರವಾಗಲಿದೆ ಎಂದು ಎನ್ ಟಿಎ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























