ಬೈಕ್ ಗೆ ಡಿಕ್ಕಿ ಹೊಡೆದ ಟೆಂಪೋ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು - Mahanayaka
9:03 PM Thursday 11 - December 2025

ಬೈಕ್ ಗೆ ಡಿಕ್ಕಿ ಹೊಡೆದ ಟೆಂಪೋ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

shrinevas rav
09/05/2023

ಉಡುಪಿ: ಕಟಪಾಡಿ ಸಮೀಪದ ಸುಭಾಷ್ ನಗರ ರೈಲ್ವೆ ಸೇತುವೆ ಬಳಿ ಮಂಗಳವಾರ ಬೆಳಗ್ಗೆ ಟೆಂಪೊ, ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬೈಕ್ ಸವಾರ ಶ್ರೀನಿವಾಸ ರಾವ್(50) ಮೃತ ದುದೈರ್ವಿ. ಕಟಪಾಡಿ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಟೆಂಪೊ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ ರಾವ್ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ