ರಾಜ್ಯಾದ್ಯಂತ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ!

ಬೆಂಗಳೂರು: ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ.
ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ಧಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆ.ಎಸ್.ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚುತ್ತಿದ್ದು, ತಾಪಮಾನವೂ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಹೀಗಾಗಿ ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬರುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತದೆ. ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth