ಮಿರ್ಜಾಪುರದಲ್ಲಿ ಟ್ರ್ಯಾಕ್ಟರ್-ಟ್ರಾಲಿ ಡಿಕ್ಕಿ: 10 ಮಂದಿ ಸಾವು - Mahanayaka

ಮಿರ್ಜಾಪುರದಲ್ಲಿ ಟ್ರ್ಯಾಕ್ಟರ್-ಟ್ರಾಲಿ ಡಿಕ್ಕಿ: 10 ಮಂದಿ ಸಾವು

04/10/2024

ಉತ್ತರ ಪ್ರದೇಶದಲ್ಲಿ ಟ್ರಕ್ ಟ್ರಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿದ ಘಟನೆ ನಡೆದಿದೆ.

ಮಿರ್ಜಾಪುರ-ವಾರಣಾಸಿ ಗಡಿಯ ಬಳಿಯ ಕಛವಾನ್ ಮತ್ತು ಮಿರ್ಜಾಮುರಾದ್ ನಡುವಿನ ಜಿಟಿ ರಸ್ತೆಯಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಿರ್ಜಾಪುರ) ಅಭಿನಂದನ್ ತಿಳಿಸಿದ್ದಾರೆ.

ಭದೋಹಿ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಿಂದ ಹಿಂದಿರುಗುತ್ತಿದ್ದ 13 ಕಾರ್ಮಿಕರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿಗೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ