ಭೀಕರ ಅಪಘಾತ: ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿಯ ದಾರುಣ ಸಾವು - Mahanayaka
10:49 PM Thursday 28 - August 2025

ಭೀಕರ ಅಪಘಾತ: ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿಯ ದಾರುಣ ಸಾವು

haveri
28/06/2024


Provided by

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 13 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ನಡೆದಿದೆ.

ಸುಭದ್ರಬಾಯಿ (65), ಮಾನಸ (29), ಮಂಜುಳಾ (50) ,ಆದರ್ಶ (21), ಆರ್ಯ (4), ವಿಶಾಲಾಕ್ಷಿ (50), ರೂಪಾ ಬಾಯಿ (35), ನಂದನ (3), ಅಂಜಲಿ (30), ನಾಗೇಶ ರಾವ್ (51), ಅರುಣಕುಮಾರ (27), ಮಂಜುಳಾ ಬಾಯಿ (55), ಭ್ಮಾಗ್ಯಾ ಬಾಯಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದಾರೆ.

ಟಿಟಿ ವಾಹನದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ್ ಮುಗಿಸಿದ ಬಳಿಕ ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನಗುಡ್ಡಕ್ಕೆ ತೆರಳಿ ದರ್ಶನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಟಿಟಿ ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಬ್ಯಾಡಗಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಸ್ವಂತ ಗ್ರಾಮವಾದ ಹೊಳೆಹೊನ್ನೂರು ಬಳಿಯ ಎಮ್ಮೆಹಟ್ಟಿಗೆ ಸಂಬಂಧಿಕರು ದೌಡಾಯಿಸಿದ್ದು, ಇಡೀ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ. ಸಂಬಂಧಿಕರನ್ನು ನೆನೆದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಹಟ್ಟಿ ಗ್ರಾಮದ ಹಿಂದೂ ರುದ್ರಭೂಮಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ