ಆಟೋ—ಕಾರಿನ ನಡುವೆ ಭೀಕರ ಅಪಘಾತ: 6 ಮಂದಿಯ ದಾರುಣ ಸಾವು

ಪಾಟ್ನಾ: ಆಟೋ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಬೇಗುಸರಾಯ್ ನಲ್ಲಿ ನಡೆದಿದೆ.
ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಘಾತದ ಭೀಕರ ದೃಶ್ಯಗಳನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅತ್ಯಂತ ಭಯಾನಕ ದೃಶ್ಯಗಳು ಕಂಡು ಬಂದಿವೆ.
ಅಪಘಾತಕ್ಕೀಡಾದವರ ದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಕ್ತಸಿಕ್ತ ದೇಹಗಳು ಬೆಚ್ಚಿಬೀಳಿಸುವಂತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97