ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಭಯೋತ್ಪಾದಕ ದಾಳಿ ಖಂಡನೀಯ:  ದಿನೇಶ್ ಮೂಳೂರು - Mahanayaka
11:04 PM Tuesday 18 - November 2025

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಭಯೋತ್ಪಾದಕ ದಾಳಿ ಖಂಡನೀಯ:  ದಿನೇಶ್ ಮೂಳೂರು

dinesh muluru
27/04/2025

ಮಂಗಳೂರು:ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಪ್ರವಾಸಿಗರ ನರಮೇಧ ಅತ್ಯಂತ ಹೇಯ ಕೃತ್ಯವಾಗಿದ್ದು, ಇದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಖಂಡಿಸುತ್ತದೆ ಎಂದು ದಿನೇಶ್ ಮೂಳೂರು ತಿಳಿಸಿದ್ದಾರೆ.

ಈ ಘಟನೆ ಹೇಯ ಕೃತ್ಯವಾಗಿದ್ದು ಕೇಂದ್ರ ಸರ್ಕಾರ ದೇಶದ ಪ್ರಜೆಗಳ ರಕ್ಷಣೆಯ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು, ಜೊತೆಗೆ ಭಯೋತ್ಪಾದಕ ಕೃತ್ಯಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಿಂದ ಪ್ರವಾಸಕ್ಕೆ ಹೋದ ಇಬ್ಬರು ಪ್ರವಾಸಿಗರು ಭಯೋತ್ಪಾದಕ ದಾಳಿಯಲ್ಲಿ ಮೃತರಾಗಿರುವುದು  ಅತ್ಯಂತ ದುಃಖದ ವಿಚಾರ. ಮೃತರ ಕುಟುಂಬಕ್ಕೆ ಸಾಂತ್ವನಗಳನ್ನು  ಸಲ್ಲಿಸುತ್ತಾ, ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕುಟುಂಬಕ್ಕೆ ನೀಡಲಿ ಎಂದು ದಿನೇಶ್ ಮೂಳೂರು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ