ಕುಕ್ಕರ್ ಬ್ಲಾಸ್ಟ್ ಆರೋಪಿ ಬಗ್ಗೆ ಪಠ್ಯದಲ್ಲಿ ಸೇರಿಸುತ್ತಾರೆಯೇ?: ಸುನೀಲ್ ಕುಮಾರ್
ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ಸರ್ಕಾರದವರು ಕುಕ್ಕರ್ ಬ್ಲಾಸ್ಟ್ ಆರೋಪಿಬಗ್ಗೆ ಪಠ್ಯದಲ್ಲಿ ಸೇರಿಸುತ್ತಾರೆಯೇ? ಎಂದು ತಿರುಗೇಟು ನೀಡುವ ಮೂಲಕ ಪ್ರಶ್ನಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು.
ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರು, ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಪ್ರಶ್ನಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























