ತಾಜ್ ವೆಸ್ಟೆಂಡ್‌ ನಲ್ಲಿ ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್​ ಗೆ ಎಚ್​.ಡಿ.ಕುಮಾರಸ್ವಾಮಿ ತಿರುಗೇಟು - Mahanayaka

ತಾಜ್ ವೆಸ್ಟೆಂಡ್‌ ನಲ್ಲಿ ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್​ ಗೆ ಎಚ್​.ಡಿ.ಕುಮಾರಸ್ವಾಮಿ ತಿರುಗೇಟು

h d kumaraswamy
15/03/2022

ಬೆಂಗಳೂರು: ತಾಜ್ ವೆಸ್ಟೆಂಡ್‌ ನಲ್ಲಿ ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ. ಸರ್ಕಾರಿ ಬಂಗಲೆ ಇರಲಿಲ್ಲ, ಆದ್ದರಿಂದ ವಿಶ್ರಾಂತಿ ಪಡೆಯಲು ಹೋಗುತ್ತಿದ್ದೆ ಎಂದು ಎಂಎಲ್​ ಸಿ ಸಿ.ಪಿ.ಯೋಗೇಶ್ವರ್‌ಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.


Provided by
Provided by
Provided by
Provided by
Provided by
Provided by
Provided by

ಕುಮಾರಸ್ವಾಮಿ ಹೊಟೇಲ್​ ನಲ್ಲಿ ರಾಸಲೀಲೆ ಮಾಡಿಕೊಂಡಿದ್ದ ಸಿ.ಪಿ.ಯೋಗೇಶ್ವರ್​ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈಗಲೂ ತಾಜ್ ವೆಸ್ಟೆಂಡ್​ ಗೆ ಹೋಗುತ್ತೇನೆ. ನನ್ನದು ತೆರೆದ ಪುಸ್ತಕ. ನನ್ನ ಪಿಎ ಈಗಲೂ ಇರುತ್ತಾರೆ. ಸಾ.ರಾ ಮಹೇಶ್ ಕೂಡ ಇರುತ್ತಿದ್ದರು. ಇವನಿಂದ ನೋಡಿ ಕಲಿಯಬೇಕಿತ್ತಾ, ಇವನು ಗುಡಿಸಲಲ್ಲಿ ಇದ್ದನಾ? ಇಲ್ಲೆ ಯು.ಬಿ.ಸಿಟಿ ಪಕ್ಕದಲ್ಲಿದ್ದ. ನನ್ನದು ಕದ್ದುಮುಚ್ಚಿ ಯಾವುದೂ ಇಲ್ಲ ಎಂದರು.

ಸಿಎಂ ಆಗಿದ್ದು ಚನ್ನಪಟ್ಟಣಕ್ಕೆ ಅಲ್ಲ, ಇಡೀ ರಾಜ್ಯಕ್ಕೆ. ಕರ್ನಾಟಕ ರಾಜ್ಯದ ಸಮಸ್ಯೆ ಬಗೆಹರಿಸಲು. ಚನ್ನಪಟ್ಟಣಕ್ಕೆ ಶಾಸಕನಾಗಿ ಏನು ಕೆಲಸ ಮಾಡಿಸಬೇಕೋ ಎಲ್ಲಾ ಮಾಡಿದೆ. ಇವನು ಸರ್ಟಿಫಿಕೇಟ್ ಕೊಡೋದಲ್ಲ, ಆರಿಸರೋ ಜನರು. ಮೆಗಾಸಿಟಿ ಅಂತ ಪ್ರಾಜೆಕ್ಟ್ ಮಾಡಲು ಹೋಗಿ ಸಾವಿರಾರು ಜನರನ್ನ ಬೀದಿ ಪಾಲು ಮಾಡಿದ. ಸಿನಿಮಾ ತೆಗೆದು ಎಲ್ಲರನ್ನೂ ಹಾಳು ಮಾಡಿದ. ಕಂಡೋರ ದುಡ್ಡು ತೆಗೆದುಕೊಂಡು ಹಾಳು ಮಾಡಿದ. ಇವನು ನನ್ನ ವಿರುದ್ಧ ಆರೋಪ ಮಾಡ್ತಾನಾ? ಎಂದು ಗುಡುಗಿದರು.

ಚನ್ನಪಟ್ಟಣದಲ್ಲಿ ಮುಗಿದ ಅಧ್ಯಾಯ. ಚನ್ನಪಟ್ಟಣದಲ್ಲಿ ಕೆಲಸವೇ ಆಗಿಲ್ಲ ಅನ್ನೋರು ಚನ್ನಪಟ್ಟಣಕ್ಕೆ ಬರಲಿ. ಖಾಸಗಿ ಬಸ್ ನಿಲ್ದಾಣಕ್ಕೆ 30 ಕೋಟಿ ರೂ. ಪ್ರಾಜೆಕ್ಟ್ ಮಾಡಿ ಅಂದಾಜು ಮಾಡಿದ್ರು. ಅವನ್ಯಾರೋ ಕಂಟ್ರ್ಯಾಕ್ಟರ್​ ಕೈಯಲ್ಲಿ ಗುಂಡಿ ಹೊಡೆಸಿದ್ದಾನೆ. ಅದಕ್ಕೆ ನಾನು ಹಣ ಕೊಡಿಸಬೇಕಾ? ಅಲ್ಲಿ ಹೋಗಿ ನೋಡಿ ತಗಡು ಹೊಡೆಸಿ ಇಟ್ಟಿದ್ದಾನೆ. ಅಂಬೇಡ್ಕರ್ ಭವನದಲ್ಲಿ ಗುಂಡಿಯಾಗಿದೆ, ನೀರು ನಿಂತಿದೆ. ಅದನ್ನು ನಾನು ಹೋಗಿ ಕ್ಲೀನ್ ಮಾಡಿಸಬೇಕು ಎಂದರು.

ದೇವೇಗೌಡರ ಕುಟುಂಬಕ್ಕೆ ಚನ್ನಪಟ್ಟಣದ ಸಂಬಂಧವಿತ್ತು. ಓಪನ್ ಚರ್ಚೆಗೆ ನಾನು ಸಿದ್ದ, ಬರಲಿ ಯಾವ ವಿಚಾರ ಚರ್ಚೆ ಮಾಡ್ತಾರೆ? ನಾನು ಯಾವುದೇ ಚರ್ಚೆಗೆ ಸಿದ್ಧ. ಬರಲಿ ಚನ್ನಪಟ್ಟಣದಲ್ಲೇ ಚರ್ಚೆ ಮಾಡೋಣ. ಮೆಗಾಸಿಟಿ ಮಾಡಿ ಲೂಟಿ ಹೊಡೆದು ಜನ ಬೀದಿ ಪಾಲಾಗಿದ್ದಾರೆ. ಸೈನಿಕ ಅಂತ ಸಿನಿಮಾ ಮಾಡಲು ಹೋಗಿದ್ದ, ಇಂದಿಗೂ ಹಣ ಕೊಟ್ಟವರು ಬೀದಿ ಪಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಂದು ಹಿಜಾಬ್​ ತೀರ್ಪು: ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಮೃತ್ಯು

ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಉಕ್ರೇನ್‌ನಲ್ಲಿ ಅಮೇರಿಕದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬ್ರೆಂಟ್‌ ರೆನೌಡ್‌ ಕೊಲೆ

ಇತ್ತೀಚಿನ ಸುದ್ದಿ