ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60) ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗಂಭೀರ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್ರಭು ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದ್ದು, ಈ ಸಂದರ್ಭ ಘಟನೆ ನಡೆದಿದೆ.
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka