ತಲೆಗೆ ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಶಾಸಕನ ಪುತ್ರ ಆತ್ಮಹತ್ಯೆ! - Mahanayaka
10:52 AM Thursday 15 - January 2026

ತಲೆಗೆ ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಶಾಸಕನ ಪುತ್ರ ಆತ್ಮಹತ್ಯೆ!

vaibhav
12/11/2021

ಜಬಲ್ ಪುರ್: ಕಾಂಗ್ರೆಸ್ ಶಾಸಕನ ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದ್ದು,  ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಮಗ ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ.

ಜಬಲ್ಪುರದ ಬಾರ್ಗಿ ಕ್ಷೇತ್ರದ ಶಾಸಕ ಸಂಜಯ್ ಯಾದವ್ ಅವರ ಮಗ 16 ವರ್ಷ ವಯಸ್ಸಿನ ವೈಭವ್ ಆತ್ಮಹತ್ಯೆಗೆ ಶರಣಾಗಿರುವ ಬಾಲಕ. ಈತ ದ್ವಿತೀಯ ಪಿಯುಸಿ ಓದುತ್ತಿದ್ದ ಎಂದು ತಿಳಿದು ಬಂದಿದೆ.  ಬಾತ್ ರೂಮ್ ಗೆ ಹೋದ ಬಾಲಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗುಂಡಿನ ಶಬ್ಧ ಕೇಳಿದ ತಕ್ಷಣವೇ ಬಾತ್ ರೂಮ್ ನಿಂದ ಬಾಲಕನನ್ನು ಹೊರ ತಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆತ ಅದಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಸಾವಿಗೂ ಮೊದಲು ತನ್ನ ಸ್ನೇಹಿತರಿಗೆ ಕರೆ ಮಾಡಿ. ತನ್ನ ಜೊತೆಗೆ ಇಷ್ಟು ದಿನ ಕಾಲ ಕಳೆದಿರುವುದಕ್ಕೆ ಧನ್ಯವಾದ ಹೇಳಿದ್ದ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ  ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

“47ರ ಸ್ವಾತಂತ್ರ್ಯ ಭಿಕ್ಷೆ, ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” | ನಟಿ ಕಂಗನಾ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ

ಶಾಕಿಂಗ್ ನ್ಯೂಸ್: ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿದ ಬಂಡೆಗಳು

ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ | ಹೈಕೋರ್ಟ್ ಪ್ರಶ್ನೆ

ನಿಧಿಯಾಸೆಗಾಗಿ ಬೆತ್ತಲೆ ಪೂಜೆ: ಮೌಢ್ಯ ಆಚರಣೆಯಲ್ಲಿ ತೊಡಗಿದ್ದ 6 ಮಂದಿ ಅರೆಸ್ಟ್

ಬಿಟ್ ಕಾಯಿನ್ ಹಗರಣ ಆರೋಪ ನಿರ್ಲಕ್ಷಿಸಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ!

ಮರಿ ಆನೆಗೆ “ಪುನೀತ್ ರಾಜ್ ಕುಮಾರ್” ಎಂದು ನಾಮಕರಣ ಮಾಡಿದ ಅರಣ್ಯ ಇಲಾಖೆ

ಇತ್ತೀಚಿನ ಸುದ್ದಿ