2:22 AM Wednesday 20 - August 2025

ತಂಡದಿಂದ ಬಿಜೆಪಿ ಮುಖಂಡನ ಬರ್ಬರ ಹತ್ಯೆ

praveen
26/07/2022

ಸುಳ್ಯ: ಬಿಜೆಪಿ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ  ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಯುವಕನಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಫಾರ್ಮ್ ಹೊಂದಿರುವ ಇವರು ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಕೋಳಿ ಫಾರ್ಮ್ ಮುಚ್ಚಿ ಮನೆಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಏಕಾಏಕಿ ಬೈಕ್ ನಲ್ಲಿ ಬಂದ ಇಬ್ಬರು ಪ್ರವೀಣ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ದಾರಿ ಮಧ್ಯ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ  ಬೆಳ್ಳಾರೆ ಪೇಟೆ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version