ತಂದೆಯ ಲಾರಿಯಡಿಗೆ ಬಿದ್ದು ಪುತ್ರನ ದಾರುಣ ಸಾವು - Mahanayaka
7:58 AM Wednesday 15 - October 2025

ತಂದೆಯ ಲಾರಿಯಡಿಗೆ ಬಿದ್ದು ಪುತ್ರನ ದಾರುಣ ಸಾವು

11/03/2021

ಬೆಳ್ತಂಗಡಿ: ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಮಗ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಮೂಡುಬಿದಿರೆಯಲ್ಲಿ ನಡೆದಿದ್ದು, ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.


Provided by

ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ 8 ವರ್ಷ ವಯಸ್ಸಿನ ಮುರ್ಷಿದ್  ಮೃತಪಟ್ಟ ಬಾಲಕನಾಗಿದ್ದಾನೆ.

ತಂದೆ ಕಲ್ಲಿನ ಕ್ವಾರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮುರ್ಷಿದ್ ಕೂಡ ತೆರಳಿದ್ದಾನೆ. ತಂದೆ ಲಾರಿ ಚಲಾಯಿಸುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ  ಲಾರಿಯಡಿಗೆ ಬಾಲಕ ಬಿದ್ದಿದ್ದಾನೆ. ಈ ವೇಳೆ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅದಾಗಲೇ ಬಾಲಕ ಮೃತಪಟ್ಟಿದ್ದಾನೆ.

ಉಜಿರೆ ನಿವಾಸಿಯಾಗಿರುವ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮುರ್ಷಿದ್ ಮೊದಲನೆಯವನಾಗಿದ್ದ, ಪ್ರಸ್ತುತ ಉಜಿರೆಯ ಕೊಟ್ರೋಡಿ ಕಾಂಪೌಂಡ್ ನ ರೈಫಾ ಗಾರ್ಡನ್ ಫ್ಲಾಟ್‌ನಲ್ಲಿ ನೆಲೆಸಿದ್ದ ದಂಪತಿಗೆ ನಾಲ್ಕು ವರ್ಷ ಪ್ರಾಯದ ಪುತ್ರಿ ಇದ್ದಾಳೆ. ಇದೀಗ ತನ್ನ ಲಾರಿಯಡಿಗೆ ಸಿಲುಕಿ ತನ್ನ ಮಗ ಸಾವನ್ನಪ್ಪಿರುವುದರಿಂದ ದಂಪತಿ ಆಘಾತಕ್ಕೊಳಗಾಗಿದ್ದಾರೆ.

ಅಲ್ಲೇ ಮರಣೋತ್ತರ ಪರೀಕ್ಷೆ ಕೈಗೊಂಡು ರಾತ್ರಿ 12.30ರ ವೇಳೆಗೆ ಉಜಿರೆ ಮಸ್ಜಿದ್ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಘಟನೆ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ