3:50 PM Saturday 24 - January 2026

ಮಗಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯಿಂದಲೇ ಅತ್ಯಾಚಾರ!

stop
25/01/2022

ಹೈದರಾಬಾದ್: ಮಗಳು ಹೆಚ್ಚು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ವಿಶಾಖಪಟ್ಟಣಂನ ವೈಜಾಗ್ ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 42 ವರ್ಷ ವಯಸ್ಸಿನ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ತಂದೆಯ ಕೃತ್ಯದಿಂದ ನಿಂದ ಬಾಲಕಿಯೂ ಈ ವಿಚಾರವನ್ನು ತನ್ನ ಶಿಕ್ಷಕಿ ಬಳಿಯಲ್ಲಿ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ತಂದೆಯನ್ನು ಶಾಲೆಗೆ ಕರೆದು ವಿಚಾರಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಕ್ಷಮೆಯಾಚಿಸಿದ್ದಾನೆ ಎನ್ನಲಾಗಿದೆ.  ತಕ್ಷಣವೇ ಶಿಕ್ಷಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಲಕಿಯಿಂದ ದೂರು ದಾಖಲಿಸಿಕೊಳ್ಳಲಾಗಿದೆ.

ಬಾಲಕಿಯ ದೂರಿನನ್ವಯ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ಮಗಳು ಹೆಚ್ಚು ಮೊಬೈಲ್ ನಲ್ಲಿಯೇ ಕಾಲ ಕಳೆಯುತ್ತಿದ್ದಳು. ಅದಕ್ಕಾಗಿ ಅತ್ಯಾಚಾರ ನಡೆಸಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ – ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ

ತಂದೆಯನ್ನು ಮನೆಯಿಂದ ಹೊರಹಾಕಿದ ಪುತ್ರನಿಗೆ ತಕ್ಕಶಾಸ್ತಿ

 

ಇತ್ತೀಚಿನ ಸುದ್ದಿ

Exit mobile version