ಮೊಬೈಲಲ್ಲಿ ಸ್ನ್ಯಾಪ್ ಚಾಟ್ ಡೌನ್ಲೋಡ್ ಮಾಡಲು ತಂದೆ ಆಕ್ಷೇಪ: ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ

24/06/2024

ಮೊಬೈಲ್ ಫೋನ್‌ನಲ್ಲಿ ಮೆಸೇಜಿಂಗ್ ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಡ ಎಂದು ತಂದೆ ಹೇಳಿದ ನಂತರ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಡೊಂಬಿವ್ಲಿ ಪ್ರದೇಶದ ನಿಲ್ಜೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ಮೊಬೈಲ್ ಫೋನ್‌ನಲ್ಲಿ ಸ್ನ್ಯಾಪ್ ಚಾಟ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿದ್ದಳು. ಹಾಗೆ ಮಾಡದಂತೆ ಆಕೆಯ ತಂದೆ ಹೇಳಿದ್ದರು. ಇದು ಅವಳ ಕೋಪಕ್ಕೆ ಕಾರಣವಾಗಿತ್ತು ಎಂದು ಮನ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ತನ್ನ ಮನೆಯ ಮಲಗುವ ಕೋಣೆಯ ಛಾವಣಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಮರುದಿನ ಅವಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಕುಟುಂಬ ತಿಳಿಸಿದೆ.

ಮಾಹಿತಿ ಪಡೆದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version