ತಾಯಿ, ಇಬ್ಬರು ಮಕ್ಕಳ ಕೊಲೆ ‌ಪ್ರಕರಣ:  ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್

praveen bhat
23/06/2022

ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ ಮತ್ತು ಇಬ್ಬರು ಮಕ್ಕಳ ಕೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಜೂನ್ 21 ರಂದು ಈ ಆದೇಶ ನೀಡಿದ್ದಾರೆ. 2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ  ಬೆಳಗಿನಜಾವ ತ್ರಿವಳಿ ಕೊಲೆ ನಡೆದಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿಯನ್ನು ಕೊಲೆಗೈಯ್ಯಲಾಗಿತ್ತು. ಕೊಲೆ ಮಾಡಿದ  24 ಗಂಟೆಯಲ್ಲೇ ಎಪಿಎಂಸಿ ಪೊಲೀಸರು ಪ್ರವೀಣ್ ಭಟ್​​​ ನನ್ನು ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು.

ಇದೀಗ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದ್ದ ಆದೇಶ ತಿರಸ್ಕರಿಸಿರುವ ಹೈಕೋರ್ಟ್, ಪ್ರಕರಣದ ಆರೋಪಿಯಾಗಿದ್ದ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ.

ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 16 ಏಪ್ರಿಲ್ 2018ರಂದು ಪ್ರವೀಣ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಹೈಕೊರ್ಟ್ ಮೆಟ್ಟಿಲೇರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

ರಾಜೀನಾಮೆ ನೀಡಲು ಸಿದ್ಧ:  ಉದ್ಧವ್ ಠಾಕ್ರೆ

ಆಪರೇಷನ್ ಕಮಲ ಬಾಂಬ್: ಉದ್ಧವ್ ಠಾಕ್ರೆ ಸರ್ಕಾರ ಪತನಕ್ಕೆ ಡೆಡ್ ಲೈನ್

ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಘೋಷಣೆ!

ಗಂಟಲಲ್ಲಿ ದಾಳಿಂಬೆ ಬೀಜ ಸಿಲುಕಿ 10 ತಿಂಗಳ ಮಗುವಿನ ದಾರುಣ ಸಾವು

ಇತ್ತೀಚಿನ ಸುದ್ದಿ

Exit mobile version