ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ಪುತ್ರನೂ ಸಾವು! - Mahanayaka
12:53 AM Saturday 31 - January 2026

ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ಪುತ್ರನೂ ಸಾವು!

06/02/2021

ಹಾಸನ: ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ಪುತ್ರನೂ ಸಾವನ್ನಪ್ಪಿರುವ ಘಟನೆ ಹಾಸನದ ಅರಕಲಗೋಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

75 ವರ್ಷ ವಯಸ್ಸಿನ ಗೌರಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ಸುದ್ದಿ ತಿಳಿದು, ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೌರಮ್ಮ ಅವರ  57 ವರ್ಷದ ಪುತ್ರ ಗಣೇಶ್ ಮನೆಗೆ ಆಗಮಿಸಿದ್ದಾರೆ.

ಮನೆಗೆ ಬಂದ ಗಣೇಶ್ ತಾಯಿ ಗೌರಮ್ಮ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದು, ಅಂತ್ಯಸಂಸ್ಕಾರ ಮುಗಿದ ಬಳಿಕ ಮನೆಗೆ ಬಂದಿದ್ದಾರೆ. ಮನೆಗೆ ಬಂದು ಕೆಲವೇ ಗಂಟೆಗಳಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಇತ್ತೀಚಿನ ಸುದ್ದಿ