ಶಾಕ್: ಕಾಂಗ್ರೆಸ್‌ ಜೊತೆಗಿನ ತಮ್ಮ ಪಕ್ಷದ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ; ಎಎಪಿ ಮುಖಂಡ ಗೋಪಾಲ್ ರಾಯ್ ಹೇಳಿಕೆ

07/06/2024

ಕಾಂಗ್ರೆಸ್‌ ಜೊತೆಗಿನ ತಮ್ಮ ಪಕ್ಷದ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಆಗಿದೆ ಎಂದು ಆಮ್‌ ಆದ್ಮಿ ಪಕ್ಷದ ದಿಲ್ಲಿ ಸಂಚಾಲಕ ಗೋಪಾಲ್‌ ರಾಯ್ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದೊಂದಿಗೆ ಸೀಟು ಹಂಚಿಕೆ ಏರ್ಪಾಟಿನ ಸಾಧ್ಯತೆಯನ್ನೂ ಅವರು ಅಲ್ಲಗಳೆದಿದ್ದಾರೆ.
ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರ ನಿವಾಸದಲ್ಲಿ ಪಕ್ಷದ ಶಾಸಕರು ಹಾಗೂ ಹಿರಿಯ ನಾಯಕರ ಸಭೆ ನಡೆಸಿ ಮಾತನಾಡಿದ ಆಮ್‌ ಆದ್ಮಿ ಪಕ್ಷದ ದಿಲ್ಲಿ ಸಂಚಾಲಕ ಗೋಪಾಲ್‌ ರಾಯ್,
“ಲೋಕಸಭಾ ಚುನಾವಣೆಯನ್ನು ನಾವು ಜೊತೆಯಾಗಿ ಪ್ರಾಮಾಣಿಕವಾಗಿ ಎದುರಿಸಿದೆವು. ದಿಲ್ಲಿ ವಿಧಾನಸಭಾ ಚುನಾವಣೆಗೆ ಮೈತ್ರಿಯಿಲ್ಲ. ಈ ಹೋರಾಟವನ್ನು ನಾವು ದಿಲ್ಲಿಯ ಜನತೆಯ ಜೊತೆ ಹೋರಾಡಿ ಗೆಲ್ಲುತ್ತೇವೆ,” ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆಗೆ ಮೊದಲ ಬಾರಿ ಎರಡೂ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ನಡೆಸಿದ್ದವು. ಆಪ್‌ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ ಕಾಂಗ್ರೆಸ್‌ ಮೂರರಲ್ಲಿ ಸ್ಪರ್ಧಿಸಿತ್ತು. ಆದರೆ ಮೈತ್ರಿಕೂಟ ಒಂದೇ ಒಂದು ಸ್ಥಾನ ಗಳಿಸಿಲ್ಲ ಹಾಗೂ ದಿಲ್ಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version