ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ವಾತಾವರಣ: ಬಿರುಸಿನ ರಾಜಕೀಯ ಚಟುವಟಿಕೆ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರ ಹಸ್ತಾಂತರದ ವಾತಾವರಣ ಕಂಡು ಬಂದಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ಕಂಡು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವರು ಹಾಗೂ ಶಾಸಕರು ಭೇಟಿಯಾಗುತ್ತಿರುವುದು, ಚರ್ಚೆ ನಡೆಸುತ್ತಿರುವ ವಾತಾವರಣ ಸದ್ಯ ಕಂಡು ಬಂದಿದೆ. ಈ ಹಿಂದೆ ಮಾಜಿ ಸಚಿವ ಕೆ.ಎನ್.ರಾಜಣ್ಣ, ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡಿದ್ದರು, ಇದೇನಾ ನವೆಂಬರ್ ಕ್ರಾಂತಿ ಅನ್ನೋ ಅನುಮಾನ ಮೂಡುವಂತಾಗಿದೆ.
ಸಂಪುಟ ಪುನರ್ ರಚನೆಯಾದರೆ, ತಮ್ಮನ್ನು ಕೈಬಿಡಬಹುದೆಂಬ ಆತಂಕಕ್ಕೆ ಒಳಗಾಗಿರುವ ಮಂಕಾಳ ವೈದ್ಯ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಅವರನ್ನು ಶನಿವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅತ್ತ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ್ದ ಶಾಸಕರಾದ ಸಿ.ಪಿ. ಯೋಗೇಶ್ವರ್, ಶ್ರೀನಿವಾಸ ಮಾನೆ, ಯಾಸಿರ್ ಪಠಾಣ್, ಸಂಗಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೂ ಭೇಟಿಯಾಗಿ ಚರ್ಚೆ ನಡೆಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆಗಳು ಅಧಿಕಾರ ಹಸ್ತಾಂತರದ ಮುನ್ಸೂಚನೆಯೇ ಎನ್ನುವ ಅನುಮಾನಗಳು ಮೂಡಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























