ಬಿಜೆಪಿಯು ನ್ಯಾಯಾಂಗದ ಮೇಲೆ ಹಿಡಿತ ಸಾಧಿಸುವ ದಿನ ಪ್ರಜಾಪ್ರಭುತ್ವಕ್ಕೆ ಕೊನೆಯ ದಿನ: ಉದ್ಧವ್ ಠಾಕ್ರೆ

ಮುಂಬೈ: ಬಿಜೆಪಿಯು ನ್ಯಾಯಾಂಗದ ಮೇಲೆ ಹಿಡಿತ ಸಾಧಿಸುವ ದಿನ ಭಾರತದಲ್ಲಿ ಪ್ರಜಾಪ್ರಭುತ್ವದ ಕೊನೆಯ ದಿವವಾಗಲಿದೆ ಎಂದು ಮಹಾರಾಷ್ಟದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಸಂಭಾಜಿ ನಗರದಲ್ಲಿ ನಡೆದ ಮಹಾ ವಿಕಾಸ್ ಅಘಾಡಿಯ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವ ದಿನ ನ್ಯಾಯಾಂಗವು ಬಿಜೆಪಿಯ ಕೈಗೆ ಹೋಗುತ್ತದೆಯೊ ಆ ದಿನ ಬಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಕೊನೆತ ದಿನವಾಗಿದೆ ಎಂದು ಎಚ್ಚರಿಸಿದ್ದಾರೆ.
ಇಸ್ರೇಲ್ ನಲ್ಲಿ, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ನರೇಂದ್ರ ಮೋದಿಯ ಸ್ನೇಹಿತರಾಗಿರುವ ಇಸ್ರೇಲ್ ಪ್ರಧಾನಿ ಮೋದಿಯವರಂತೆ ಎಲ್ಲವನ್ನೂ ತಮ್ಮ ಹಿಡಿತದಲ್ಲಿರಬೇಕೆಂದು ಬಯಸುತ್ತಾರೆ. ಆದರೆ ಇಸ್ರೇಲ್ ನ ಜನರು ಅದನ್ನು ಕಟುವಾಗಿ ವಿರೋಧಿಸುತ್ತಿದ್ದಾರೆ. ಆದ್ದರಿಂದ ಅವರು ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಸಂವಿಧಾನವನ್ನು ಉಳಿಸಲು ನಾವು ಇದೇ ರೀತಿಯ ಹೋರಾಟವನ್ನು ಮುಂದುವರಿಸಬೇಕಾಗಿದೆ ಎಂದು ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಸಚಿವರು ನ್ಯಾಯಾಂಗದ ಮೇಲೆ ದಾಳಿಯನ್ನು ಮುಂದುವರೆಸಿದ್ದಾರೆ. ಪ್ರಸ್ತುತ ಸ್ವತಂತ್ರ ಕೊಲಿಜಿಯಂ – ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಮೂಲಕ ಅದನ್ನು ತಮ್ಮ ನಿಯಂತ್ರಣಕ್ಕೆ ತರುವ ಯೋಜನೆಯನ್ನು ಹೊಂದಿದ್ದಾರೆ ಎಂದು ಉದ್ಧವ್ ಠಾಕ್ರೆ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw