ತಡೆಗೋಡೆ ಇಲ್ಲದ ಕಾರಣ ನಾಲೆಗೆ ಉರುಳಿ ಬಿದ್ದ ಕಾರು: ಓರ್ವ ಸಾವು ಮತ್ತೋರ್ವನ ಸ್ಥಿತಿ ಗಂಭೀರ

ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಕಾರೊಂದು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಮೃತಪಟ್ಟ ವ್ಯಕ್ತಿ ಹಾಗೂ ಗಾಯಗೊಂಡವರನ್ನು ಇನ್ನೂ ಗುರುತು ಪತ್ತೆ ಹೆಚ್ಚಲಾಗಿಲ್ಲ, ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ವಿಸಿ ನಾಲೆಯ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ಜರುಗುತ್ತಿದ್ದು, ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth