ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಯುವಕನ ದಾರುಣ ಸಾವು

23/03/2024
ಮಂಗಳೂರು: ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಂಪ್ ವೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ತೊಕ್ಕೊಟ್ಟು ನಿವಾಸಿ ಸುಮಿತ್ ಶೆಟ್ಟಿ(30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 6:15ರ ವೇಳೆಗೆ ತೊಕ್ಕೊಟ್ಟು ಕಡೆಗೆ ಕಾರಿನಲ್ಲಿ ಸುಮಿತ್ ಪ್ರಯಾಣಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿತ್ತು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಮಿತ್ ಶೆಟ್ಟಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth