ಚರಂಡಿಗೆ ಉರುಳಿ ಬಿದ್ದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರು!

11/11/2023
ಚಿಕ್ಕಮಗಳೂರು: ಮೂಡಿಗೆರೆಯ ನ್ಯಾಯಾಧೀಶರರೊಬ್ಬರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಮೂಡಿಗೆರೆ ನ್ಯಾಯಾಧೀಶ ವಿಶ್ವನಾಥ್ ಅವರು ಪ್ರಯಾಣಿಸುತ್ತಿದ್ದ ಕಾರು ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದಿದೆ.
ಅದೃಷ್ಟವಶಾತ್ ನ್ಯಾಯಾಧೀಶ ವಿಶ್ವನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.