ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಯುವತಿ ಸಾವು, ಇಬ್ಬರಿಗೆ ಗಾಯ - Mahanayaka
10:12 PM Wednesday 22 - October 2025

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಯುವತಿ ಸಾವು, ಇಬ್ಬರಿಗೆ ಗಾಯ

car
06/07/2023

ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು  ಹನ(19)ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿತ್ತು. ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತಾಯಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತಪಟ್ಟ ಯುವತಿ ಬಿಬಿಎಂ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


ವಿಡಿಯೋ ನೋಡಿ:

ಇತ್ತೀಚಿನ ಸುದ್ದಿ