ಬಿಜೆಪಿಯ ಮಾಜಿ ಸಿಎಂನ ಸಿಡಿ ಬಿಡುಗಡೆಯಾಗಲಿದೆಯಂತೆ! - Mahanayaka
12:11 AM Thursday 21 - August 2025

ಬಿಜೆಪಿಯ ಮಾಜಿ ಸಿಎಂನ ಸಿಡಿ ಬಿಡುಗಡೆಯಾಗಲಿದೆಯಂತೆ!

nyam gowda
25/08/2024


Provided by

ಬಾಗಲಕೋಟೆ:  ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ಸಿಡಿ ಸದ್ಯದಲ್ಲೇ ಬಿಡುಗಡೆಯಾಗಲಿದೆಯಂತೆ. ಹೀಗಂತ ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಆಗಿದ್ದವರೊಬ್ಬರ ಸಿಡಿ ಬರುವ ಸುದ್ದಿ ಇದೆ ಅಂತ ಅವರು ಹೇಳಿದ್ದಾರೆ.

ನೀವು ಈ ಸುದ್ದಿ ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ, ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಆ ಅಶ್ಲೀಲ‌ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೇ. ಬಿಜೆಪಿ ಮಾಜಿ ‌ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಅಂತ ಅವರು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ