ಚುನಾವಣಾ ಪ್ರಚಾರಕ್ಕೆ ಹೊಸ ಆ್ಯಂಕರ್ ಪರಿಚಯಿಸಿದ ಕಮ್ಯುನಿಸ್ಟ್ ಪಾರ್ಟಿ!

ai samatha
27/03/2024

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೊಸ ಆ್ಯಂಕರ್ ವೊಬ್ಬರನ್ನು ಪರಿಚಯ ಮಾಡಿದೆ. ಇವರ ಹೆಸರು ಎಐ ಆ್ಯಂಕರ್ ಸಮತಾ. ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಆ್ಯಂಕರ್ ಸಿದ್ಧಪಡಿಸಲಾಗಿದೆ. ಸಿಎಂಐಎಂ ಬಂಗಾಳ ಘಟಕ ಈ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಹೋಳಿ ಹಬ್ಬದಂದು ಸಮತಾ ಬಂಗಾಳಿ ಭಾಷೆಯಲ್ಲಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದೇ ಎಐ ಆ್ಯಂಕರ್ ನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲು ಪಕ್ಷ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ನಾವು ಎಐ ಆ್ಯಂಕರ್ ನ್ನು ಚುನಾವಣಾ ಪ್ರಚಾರಕ್ಕೆ ಬಳಸಲಿದ್ದೇವೆ. ಯಾರಿಗೂ ಹಾನಿ ಮಾಡದ ವಿಚಾರಗಳನ್ನು ನಾವು ಯಾವಾಗಲೂ ಹುಡುಕುತ್ತಿರುತ್ತೇವೆ ಎಂದು ಅಭ್ಯರ್ಥಿ ಸೃಜನ್ ಭಟ್ಟಾಚಾರ್ಯ ಹೇಳಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಎಐ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಸಾಕಷ್ಟು ಸಾಫ್ಟ್ ವೇರ್ ಕಂಪೆನಿಗಳಲ್ಲಿ ಎಐ ತಂತ್ರಜ್ಞಾನಗಳನ್ನು ಹೆಚ್ಚು ಬಳಸುವ ಮೂಲಕ ಕಂಪೆನಿಗಳು ಕಾರ್ಮಿಕರ ಸಂಖ್ಯೆಯನ್ನು ಕಡಿಮೆಗೊಳಿಸುತ್ತಿದೆ. ಇದರಿಂದಾಗಿ ಸಾಕಷ್ಟು ಜನ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version