ಕೀಟನಾಶಕ ಸೇವಿಸಿದ ಹಾಲಿ ಸಂಸದನ ಸ್ಥಿತಿ ಚಿಂತಾಜನಕ! - Mahanayaka
1:29 PM Saturday 25 - October 2025

ಕೀಟನಾಶಕ ಸೇವಿಸಿದ ಹಾಲಿ ಸಂಸದನ ಸ್ಥಿತಿ ಚಿಂತಾಜನಕ!

ganeshamurthi
25/03/2024

ತಮಿಳುನಾಡಿನ ಹಾಲಿ ಸಂಸದರೊಬ್ಬರು ಕೀಟನಾಶಕ ಸೇವಿಸಿ ಅಸ್ವಸ್ಥರಾದ ಘಟನೆ ನಡೆದಿದ್ದು, ಏಕಾಏಕಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಮಿಳುನಾಡಿನ ಈರೋಡ್‌ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಕೀಟನಾಶಕ ಸೇವಿಸಿದವರಾಗಿದ್ದಾರೆ. ಏಕಾಏಕಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿರುವುದು ಬೆಳಕಿಗೆ ಬಂದಿದೆ.

ಗಣೇಶಮೂರ್ತಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಘಟನೆ ಸಂಬಂಧ ಆಸ್ಪತ್ರೆಗೆ ಭೇಟಿ ನೀಡಿದ ಡಿಎಂಕೆ ನಾಯಕ ದುರೈ ವೈಕೋ ಹೇಳಿದ್ದಾರೆ.

ಘಟನೆ ಹಿನ್ನೆಲೆ ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮತ್ತಿತರ ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ