ಜೆಡಿಎಸ್ ನಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟನೆಗೆ ಕ್ಷಣ ಗಣನೆ ಆರಂಭ!

19/10/2023
ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ನನ್ನದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ಕಿಡಿಕಿಡಿಯಾಗಿರುವ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಿ.ಎಂ.ಇಬ್ರಾಹಿಂ ಉಚ್ಚಾಟನೆಗೆ ಮುಂದಾಗಿದ್ದಾರೆ.
ಸಿ.ಎಂ.ಇಬ್ರಾಹಿಂ ಉಚ್ಚಾಟನೆಗೆ ಕ್ಷಣ ಗಣನೆ ಆರಂಭವಾಗಿದೆ. ಗುರುವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಧ್ಯದ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿದೆ.
ಜೆಡಿಎಸ್ ನಲ್ಲಿರುವ ಶಾಸಕರ ಪೈಕಿ ಮೂರನೇ ಎರಡು ಭಾಗದಷ್ಟು ಶಾಸಕ ಬಲವನ್ನು ತೋರಿಸಿ ಸಿ.ಎಂ.ಇಬ್ರಾಹಿಂ ಅವರಿಗೆ ಅಧಿಕೃತ ಗೇಟ್ ಪಾಸ್ ನೀಡಲು ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ.
ಇಬ್ರಾಹಿಂ ಆಟಕ್ಕೆ ತಕ್ಷಣ ಪೂರ್ಣ ವಿರಾಮ ಹಾಕಬೇಕು ಎಂಬ ಕಾರಣಕ್ಕಾಗಿ ತ್ವರಿತ ನಿರ್ಧಾರಕ್ಕೆ ಜೆಡಿಎಸ್ ಮುಂದಾಗಿದೆ.