ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಮಾತ್ರ ಶಿಕ್ಷಕರ ಬೇಡಿಕೆ ಈಡೇರಲಿದೆ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

28/11/2023
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಜನತೆ ನೀಡಿರುವ ಅಧಿಕಾರ ಇನ್ನೂ 4 ವರ್ಷ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಮಾತ್ರ ಶಿಕ್ಷಕರ ಬೇಡಿಕೆ ಈಡೇರಲಿದೆ. ಬೇರೆ ಪಕ್ಷದ ಅಭ್ಯರ್ಥಿ ಗೆಲ್ಲುವುದರಿಂದ ಶಿಕ್ಷಕರಿಗೇನು ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಅವ್ರು ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಮುಖ್ಯ ಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಆಪ್ತರಾಗಿರುವ ಭೋಜೇ ಗೌಡರಿಗೆ ಅವರದ್ದೆ ಪಕ್ಷದ ಮುಖ್ಯ ಮಂತ್ರಿ ಇದ್ದಾಗ ಶಿಕ್ಷಕರ ಪರ ಕೆಲಸ ಮಾಡಲು ಸಾಕಷ್ಟು ಅವಕಾಶ ಇತ್ತು. ಆದರೆ ಅವರು ಶಿಕ್ಷಕರ ಯಾವುದೇ ಸಮಸ್ಯೆ ಬಗೆಹರಿಸುವ ಕಡೆಗೆ ಗಮನ ಹರಿಸಲಿಲ್ಲ ಎಂದು ಆರೋಪಿಸಿದರು.
ಅಲ್ಲದೇ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಸ್.ಎಲ್. ಭೋಜೇ ಗೌಡರು ಈ ತನಕ ಶಿಕ್ಷಕರಿಗೇನು ನೀಡಿದ್ದಾರೆಂದು ವೈಟ್ ಪೇಪರ್ನಲ್ಲಿ ಲೀಸ್ಟ್ ಮಾಡಿ ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.