5:43 AM Friday 11 - September 2026

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು!

chikkamagaluru
29/11/2023

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ನಡೆದಿದೆ.

ಮೂಡಿಗೆರೆ ಕೊಟ್ಟೆಗೆಹಾರ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ ಸುಮಾರು 1:30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನು ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ವಿದ್ಯುತ್ ಕಂಬಗಳು ಇದ್ದು ವಿದ್ಯುತ್ ಕಂಬವೊಂದು ತುಂಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version