ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

12/12/2023
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.
ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ ಪಲ್ಟಿ ಹೊಡೆದಿದೆ.
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.