ತಂಗಿಗೆ ನಕಲಿ ಮಾಡಲು ಬಿಡಲಿಲ್ಲ ಎಂದು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ಮೇಲೆ ಅಣ್ಣನಿಂದ ಹಲ್ಲೆ!

ಕಲಬುರಗಿ: ತಂಗಿಗೆ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಿಲ್ಲ ಎಂಬ ಆಕ್ರೋಶದಲ್ಲಿ ಅಣ್ಣ ಹಾಗೂ ಆತನ ಸ್ನೇಹಿತರು ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ವಿದ್ಯಾರ್ಥಿನಿಯ ಅಣ್ಣ ಕೈಲಾಸ್ ಎಂಬಾತ ಪರೀಕ್ಷಾ ಕೇಂದ್ರದ ಭದ್ರತಾ ಕರ್ತವ್ಯದಲ್ಲಿದ್ದ ಕಾನ್ಸ್ ಸ್ಟೇಬಲ್ ಪಂಡಿತ್ ಪಾಂಡ್ರೆ ಮೇಲೆ ಹಲ್ಲೆ ನಡೆಸಿದ್ದಾನೆ.
ನನ್ನ ತಂಗಿಗೆ ನಕಲು ಮಾಡಲು ಬಿಡಲ್ವಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ ಕೈಲಾಸ್ ಗೆ ಆತನ ಸ್ನೇಹಿತ ಸಮೀರ್ ಎಂಬಾತನೂ ಸಾಥ್ ನೀಡಿದ್ದಾನೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕೈಲಾಸ್ ಹಾಗೂ ಸಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth